The Encyclopedia of Ar-Rahman's Guests

Selected material for Pilgrims and Um-rah teaching it in languages of the world

Selected content

ಇನ್ನಷ್ಟು

Selected Quranic verses

ನೀವು ಹಜ್ಜ್ ಕರ್ಮಗಳನ್ನು ಪೂರೈಸಿದರೆ, ನಿಮ್ಮ ಪೂರ್ವಜರನ್ನು ಸ್ಮರಿಸುವಂತೆಯೇ ಅಥವಾ ಅದಕ್ಕಿಂತಲೂ ತೀವ್ರವಾಗಿ ಅಲ್ಲಾಹನನ್ನು ಸ್ಮರಿಸಿರಿ. ಜನರಲ್ಲಿ ಕೆಲವರು ಹೇಳುತ್ತಾರೆ: “ಓ ನಮ್ಮ ಪರಿಪಾಲಕನೇ! ನಮಗೆ ಇಹಲೋಕದಲ್ಲಿ ದಯಪಾಲಿಸು.” ಅಂತಹವರಿಗೆ ಪರಲೋಕದಲ್ಲಿ ಯಾವುದೇ ಪಾಲಿಲ್ಲ.
[سورة البقرة ] • 200
ಓ ಸತ್ಯವಿಶ್ವಾಸಿಗಳೇ! ನೀವು ಇಹ್ರಾಮ್‍ನಲ್ಲಿರುವಾಗ ಬೇಟೆಯಾಡಿ ಪ್ರಾಣಿಯನ್ನು ಕೊಲ್ಲಬೇಡಿ. ನಿಮ್ಮಲ್ಲಿ ಯಾರಾದರೂ ಉದ್ದೇಶಪೂರ್ವಕ ಬೇಟೆಯಾಡಿ ಪ್ರಾಣಿಯನ್ನು ಕೊಂದರೆ, ಅದಕ್ಕಿರುವ ಪರಿಹಾರವು ಅವನು ಕೊಂದ ಮೃಗವನ್ನು ಹೋಲುತ್ತದೆಯೆಂದು ಇಬ್ಬರು ನ್ಯಾಯಸಮ್ಮತ ಜನರು ತೀರ್ಪು ನೀಡುವ ಪ್ರಾಣಿಯನ್ನು ಕಅಬಾಲಯಕ್ಕೆ ಹರಕೆಯ ರೂಪದಲ್ಲಿ ತಲುಪುವ ಬಲಿಮೃಗವಾಗಿ ನೀಡುವುದು; ಅಥವಾ ಅದಕ್ಕೆ ಪರಿಹಾರವಾಗಿ ಬಡವರಿಗೆ ಅನ್ನದಾನ ಮಾಡುವುದು; ಅಥವಾ ಅದಕ್ಕೆ ಸಮಾನವಾಗುವಷ್ಟು ಸಂಖ್ಯೆಯ ಉಪವಾಸ ಆಚರಿಸುವುದು.[1] ಅದು ಅವನು ಮಾಡಿದ ಕರ್ಮದ ಫಲವನ್ನು ಅವನು ಅನುಭವಿಸಲಿಕ್ಕಾಗಿ. ಈ ಹಿಂದೆ ಸಂಭವಿಸಿದ ತಪ್ಪುಗಳನ್ನು ಅಲ್ಲಾಹು ಕ್ಷಮಿಸಿದ್ದಾನೆ. ಆದರೆ ಯಾರಾದರೂ ಅದನ್ನು ಪುನರಾವರ್ತಿಸಿದರೆ, ಅಲ್ಲಾಹು ಅವನಿಂದ ಪ್ರತೀಕಾರವನ್ನು ಪಡೆಯುವನು. ಅಲ್ಲಾಹು ಪ್ರಬಲನು ಮತ್ತು ಪ್ರತೀಕಾರ ಪಡೆಯುವವನಾಗಿದ್ದಾನೆ.
[سورة المائدة ] • 95
ಪವಿತ್ರ ಭವನವಾದ ಕಅಬಾಲಯವನ್ನು ಮತ್ತು ಯುದ್ಧ ನಿಷೇಧಿತ ತಿಂಗಳನ್ನು ಅಲ್ಲಾಹು ಜನರ ಅಸ್ತಿತ್ವಕ್ಕೆ ಆಧಾರವಾಗಿ ಮಾಡಿದ್ದಾನೆ. (ಅದೇ ರೀತಿ) ಬಲಿಮೃಗವನ್ನು ಮತ್ತು (ಅವುಗಳ) ಕೊರಳಪಟ್ಟಿಗಳನ್ನು ಸಹ. ಇದೇಕೆಂದರೆ, ನಿಶ್ಚಯವಾಗಿಯೂ ಭೂಮ್ಯಾಕಾಶಗಳಲ್ಲಿರುವುದೆಲ್ಲವನ್ನೂ ಅಲ್ಲಾಹು ತಿಳಿದಿದ್ದಾನೆ ಮತ್ತು ನಿಶ್ಚಯವಾಗಿಯೂ ಅಲ್ಲಾಹನಿಗೆ ಎಲ್ಲಾ ವಿಷಯಗಳ ಬಗ್ಗೆ ಸಂಪೂರ್ಣ ಜ್ಞಾನವಿದೆಯೆಂದು ನೀವು ತಿಳಿಯುವುದಕ್ಕಾಗಿದೆ.
[سورة المائدة ] • 97
ಜನರಿಗೆ ಹಜ್ಜ್ ನಿರ್ವಹಿಸಲು ಕರೆ ನೀಡಿರಿ. ಜನರು ತಮ್ಮ ಬಳಿಗೆ ಕಾಲ್ನಡಿಗೆಯಲ್ಲಿ ಮತ್ತು ಸಣಕಲು ಒಂಟೆಗಳ ಮೇಲೇರಿ ಬರುವರು. ಅವರು ವಿದೂರವಾದ ಎಲ್ಲಾ ಸ್ಥಳಗಳಿಂದಲೂ ಬರುವರು.
[سورة الحج ] • 27
ನಾವು ಬಲಿ ಒಂಟೆಗಳನ್ನು ನಿಮಗೋಸ್ಕರ ಅಲ್ಲಾಹನ ಲಾಂಛನಗಳಲ್ಲಿ ಸೇರಿಸಿದ್ದೇವೆ. ನಿಮಗೆ ಅದರಲ್ಲಿ ಒಳಿತಿದೆ. ಆದ್ದರಿಂದ, ಅವುಗಳನ್ನು ಸಾಲಾಗಿ ನಿಲ್ಲಿಸಿ ಅವುಗಳ ಮೇಲೆ ಅಲ್ಲಾಹನ ಹೆಸರನ್ನು ಉಚ್ಛರಿಸಿರಿ. ನಂತರ ಅವು ತಮ್ಮ ಪಾರ್ಶ್ವಗಳ ಮೇಲೆ ಬಿದ್ದರೆ, ನೀವೂ ತಿನ್ನಿರಿ ಮತ್ತು ನಿಮ್ಮ ಮುಂದೆ ಕೈಯೊಡ್ಡದ ಬಡವರಿಗೆ ಮತ್ತು ಬೇಡಿ ತಿನ್ನುವವರಿಗೆ ತಿನ್ನಿಸಿರಿ. ಈ ರೀತಿ ನಾವು ಅವುಗಳನ್ನು ನಿಮಗೆ ಅಧೀನಗೊಳಿಸಿದ್ದೇವೆ. ನೀವು ಕೃತಜ್ಞರಾಗುವುದಕ್ಕಾಗಿ.
[سورة الحج ] • 36
ಇನ್ನಷ್ಟು

Selected prophetic hadiths

ಅಬ್ದುಲ್ಲಾ ಬಿನ್ ಅಮ್ರ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: “ನನ್ನಿಂದ ಒಂದೇ ಒಂದು ವಚನವನ್ನಾದರೂ ತಲುಪಿಸಿ. ಬನೂ ಇಸ್ರಾಯೀಲರಿಂದ ಉಲ್ಲೇಖಿಸಿ, ಅದರಲ್ಲಿ ಯಾವುದೇ ತೊಂದರೆಯಿಲ್ಲ. ಆದರೆ, ಯಾರು ನನ್ನ ಬಗ್ಗೆ ಉದ್ದೇಶಪೂರ್ವಕವಾಗಿ ಸುಳ್ಳು ಹೇಳುತ್ತಾನೋ ಅವನು ನರಕದಲ್ಲಿ ತನ್ನ ಆಸನವನ್ನು ಸಿದ್ಧಪಡಿಸಿಕೊಳ್ಳಲಿ.”
صحيح
رواه البخاري
ಆಯಿಶ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೀಗೆ ಹೇಳುವುದನ್ನು ನಾನು ಕೇಳಿದ್ದೇನೆ: "ಆಹಾರವು ಸಿದ್ಧವಾಗಿರುವಾಗ ಮತ್ತು ಮಲಮೂತ್ರಗಳನ್ನು ಅದುಮಿಕೊಂಡು ನಮಾಝ್ ನಿರ್ವಹಿಸಬಾರದು."
صحيح
رواه مسلم
ಅಬೂ ಹುರೈರ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ನಿಮ್ಮಲ್ಲೊಬ್ಬರಿಗೆ ಅಶುದ್ಧಿಯುಂಟಾದರೆ ಅವರು ವುದೂ ನಿರ್ವಹಿಸುವ ತನಕ ಅಲ್ಲಾಹು ಅವರ ನಮಾಝನ್ನು ಸ್ವೀಕರಿಸುವುದಿಲ್ಲ."
صحيح
متفق عليه
ಅಬೂ ಹುರೈರ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ನನ್ನ ಸಮುದಾಯದಲ್ಲಿರುವ ಎಲ್ಲರೂ ಸ್ವರ್ಗಕ್ಕೆ ಹೋಗುತ್ತಾರೆ; ನಿರಾಕರಿಸಿದವನ ಹೊರತು." ಅನುಯಾಯಿಗಳು ಕೇಳಿದರು: "ಓ ಅಲ್ಲಾಹನ ಸಂದೇಶವಾಹಕರೇ! (ಸ್ವರ್ಗಕ್ಕೆ ಹೋಗಲು) ನಿರಾಕರಿಸುವವನು ಯಾರು?" ಅವರು ಉತ್ತರಿಸಿದರು: "ಯಾರು ನನ್ನ ಆಜ್ಞೆಗಳನ್ನು ಪಾಲಿಸುತ್ತಾನೋ ಅವನು ಸ್ವರ್ಗಕ್ಕೆ ಹೋಗುತ್ತಾನೆ; ಮತ್ತು ಯಾರು ನನ್ನ ಆಜ್ಞೆಗಳನ್ನು ಪಾಲಿಸುವುದಿಲ್ಲವೋ ಅವನು (ಸ್ವರ್ಗಕ್ಕೆ ಹೋಗಲು) ನಿರಾಕರಿಸಿದನು."
صحيح
رواه البخاري
ಅನಸ್ ಬಿನ್ ಮಾಲಿಕ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: “ಯಾರು ತನ್ನ ಜೀವನೋಪಾಯವು ವಿಶಾಲವಾಗಲು ಮತ್ತು ತನ್ನ ಆಯುಷ್ಯವು ದೀರ್ಘವಾಗಲು ಬಯಸುತ್ತಾನೋ ಅವನು ಕುಟುಂಬ ಸಂಬಂಧಗಳನ್ನು ಜೋಡಿಸಲಿ.”
صحيح
متفق عليه
ಇನ್ನಷ್ಟು