ಉಮರ್ ಬಿನ್ ಖತ್ತಾಬ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ಕರ್...
صحيح
متفق عليه

ಪ್ರತಿಯೊಂದು ಕರ್ಮವನ್ನೂ ಉದ್ದೇಶಗಳ ಆಧಾರದ ಮೇಲೆ ಪರಿಗಣಿಸಲಾಗುತ್ತದೆಯೆಂದು ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಇಲ್ಲಿ ವಿವರಿಸುತ್ತಾರೆ. ಈ ನಿಯಮವು ಆರಾಧ...
ಆಯಿಶ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ನಮ್ಮ ಈ ವಿಷಯದಲ್ಲಿ...
صحيح
متفق عليه

ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಇಲ್ಲಿ ವಿವರಿಸುವುದೇನೆಂದರೆ, ಧರ್ಮದಲ್ಲಿ ಹೊಸದಾದ ಒಂದು ಕಾರ್ಯವನ್ನು ಯಾರಾದರೂ ಆವಿಷ್ಕರಿಸಿದರೆ, ಅಥವಾ ಕುರ್‌ಆನ್ ಮತ...
ಉಮರ್ ಬಿನ್ ಖತ್ತಾಬ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಒಂದು ದಿನ ನಾವು ಅಲ್ಲಾಹನ ಸಂದೇಶವಾಹಕರ (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ)...
صحيح
رواه مسلم

ಇಲ್ಲಿ ಉಮರ್ ಬಿನ್ ಖತ್ತಾಬ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ತಿಳಿಸುವುದೇನೆಂದರೆ, ಒಮ್ಮೆ ಜಿಬ್ರೀಲ್ (ಅವರ ಮೇಲೆ ಶಾಂತಿಯಿರಲಿ) ಅಪರಿಚಿತ ವ್ಯಕ್ತಿಯ ರೂಪದಲ್ಲಿ ಸಹಾಬಿಗಳ (ಅಲ್...
ಅಬ್ದುಲ್ಲಾ ಬಿನ್ ಉಮರ್ (ಅಲ್ಲಾಹು ಅವರಿಬ್ಬರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರ...
صحيح
متفق عليه

ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಇಸ್ಲಾಂ ಧರ್ಮವನ್ನು ಐದು ಸ್ತಂಭಗಳಿಂದ ಎತ್ತಿಹಿಡಿಯಲಾದ ಬಲಿಷ್ಠ ಕಟ್ಟಡಕ್ಕೆ ಹೋಲಿಸಿದ್ದಾರೆ. ಇಸ್ಲಾಂ ಧರ್ಮದ ಇತರ ಬೋಧ...
ಮುಆದ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಒಮ್ಮೆ ಉಫೈರ್ ಎಂಬ ಹೆಸರಿನ ಒಂದು ಕತ್ತೆಯ ಮೇಲೆ ನಾನು ಪ್ರವಾದಿಯವರ (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶ...
صحيح
متفق عليه

ಈ ಹದೀಸಿನಲ್ಲಿ ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ದಾಸರ ಮೇಲಿರುವ ಅಲ್ಲಾಹನ ಹಕ್ಕನ್ನು ಮತ್ತು ಅಲ್ಲಾಹನ ಮೇಲಿರುವ ದಾಸರ ಹಕ್ಕನ್ನು ವಿವರಿಸುತ್ತಿದ್ದಾರೆ....

ಪ್ರತಿಯೊಂದು ಕರ್ಮವನ್ನೂ ಉದ್ದೇಶಗಳ ಆಧಾರದ ಮೇಲೆ ಪರಿಗಣಿಸಲಾಗುತ್ತದೆಯೆಂದು ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಇಲ್ಲಿ ವಿವರಿಸುತ್ತಾರೆ. ಈ ನಿಯಮವು ಆರಾಧನೆಗಳು, ವ್ಯವಹಾರಗಳು ಮುಂತಾದ ಎಲ್ಲಾ ಕರ್ಮಗಳಿಗೂ ಸಮಾನವಾಗಿ ಅನ್ವಯಿಸುತ್ತದೆ. ಯಾರಾದರೂ ಒಂದು ಕರ್ಮದ ಮೂಲಕ ಲಾಭವನ್ನು ಉದ್ದೇಶಿಸಿದರೆ ಅವನಿಗೆ ಆ ಲಾಭವು ಸಿಗುತ್ತದೆಯೇ ವಿನಾ ಯಾವುದೇ ಪ್ರತಿಫಲ ಸಿಗುವುದಿಲ್ಲ. ಆದರೆ ಯಾರಾದರೂ ಒಂದು ಕರ್ಮದ ಮೂಲಕ ಅಲ್ಲಾಹನ ಸಾಮೀಪ್ಯವನ್ನು ಉದ್ದೇಶಿಸಿದರೆ ಅವನು ಆ ಕರ್ಮಕ್ಕೆ ಪುಣ್ಯ ಮತ್ತು ಪ್ರತಿಫಲಗಳನ್ನು ಪಡೆಯುತ್ತಾನೆ. ಅದು ತಿನ್ನುವುದು ಕುಡಿಯುವುದು ಮುಂತಾದ ರೂಢಿಯಾಗಿ ಮಾಡುವ ಕರ್ಮಗಳಾಗಿದ್ದರೂ ಸಹ. ನಂತರ ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಉದ್ದೇಶವು ಬಾಹ್ಯವಾಗಿ ನೋಡುವಾಗ ಒಂದೇ ರೂಪದಲ್ಲಿದ್ದರೂ ಸಹ ಅದು ಒಳಗೊಂಡಿರುವ ಪರಿಣಾಮವನ್ನು ಒಂದು ಉದಾಹರಣೆಯ ಮೂಲಕ ವಿವರಿಸುತ್ತಾರೆ. ಅವರು ವಿವರಿಸುವಂತೆ, ಒಬ್ಬ ವ್ಯಕ್ತಿ ಅಲ್ಲಾಹನ ಸಂಪ್ರೀತಿಯನ್ನು ಉದ್ದೇಶಿಸಿ ತನ್ನ ಊರನ್ನು ತೊರೆದು ವಲಸೆ (ಹಿಜ್ರ) ಹೋದರೆ ಅದು ಧಾರ್ಮಿಕ ರೂಪದಲ್ಲಿರುವ ಸ್ವೀಕಾರಯೋಗ್ಯ ವಲಸೆಯಾಗಿದ್ದು ಅವನ ಉದ್ದೇಶದ ಪ್ರಾಮಾಣಿಕತೆಯಿಂದಾಗಿ ಪ್ರತಿಫಲಾರ್ಹವಾಗುತ್ತದೆ. ಆದರೆ ಒಬ್ಬ ವ್ಯಕ್ತಿ ತನ್ನ ವಲಸೆಯ (ಹಿಜ್ರ) ಮೂಲಕ ಹಣ ಸಂಪಾದಿಸುವುದು, ಸ್ಥಾನಮಾನವನ್ನು ಪಡೆಯುವುದು, ವ್ಯಾಪಾರ ಮಾಡುವುದು, ವಿವಾಹವಾಗುವುದು ಮುಂತಾದ ಭೌತಿಕ ಲಾಭವನ್ನು ಉದ್ದೇಶಿಸಿದರೆ, ಅವನು ತನ್ನ ವಲಸೆಯ ಮೂಲಕ ಅವನು ಉದ್ದೇಶಿಸಿದ ಲಾಭವನ್ನಲ್ಲದೆ ಬೇರೇನನ್ನೂ ಪಡೆಯುವುದಿಲ್ಲ. ಹಿಜ್ರ ಮಾಡಿದ್ದಕ್ಕಾಗಿ ಅವನಿಗೆ ಯಾವುದೇ ಪ್ರತಿಫಲ ಸಿಗುವುದಿಲ್ಲ.
Hadeeth details

ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಇಲ್ಲಿ ವಿವರಿಸುವುದೇನೆಂದರೆ, ಧರ್ಮದಲ್ಲಿ ಹೊಸದಾದ ಒಂದು ಕಾರ್ಯವನ್ನು ಯಾರಾದರೂ ಆವಿಷ್ಕರಿಸಿದರೆ, ಅಥವಾ ಕುರ್‌ಆನ್ ಮತ್ತು ಸುನ್ನತ್‌ನಲ್ಲಿ ಆಧಾರವಿಲ್ಲದ ಒಂದು ಕಾರ್ಯವನ್ನು ಮಾಡಿದರೆ, ಅದು ತಿರಸ್ಕೃತವಾಗಿದೆ. ಅಲ್ಲಾಹು ಅದನ್ನು ಸ್ವೀಕರಿಸುವುದಿಲ್ಲ.
Hadeeth details

ಇಲ್ಲಿ ಉಮರ್ ಬಿನ್ ಖತ್ತಾಬ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ತಿಳಿಸುವುದೇನೆಂದರೆ, ಒಮ್ಮೆ ಜಿಬ್ರೀಲ್ (ಅವರ ಮೇಲೆ ಶಾಂತಿಯಿರಲಿ) ಅಪರಿಚಿತ ವ್ಯಕ್ತಿಯ ರೂಪದಲ್ಲಿ ಸಹಾಬಿಗಳ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ಬಳಿಗೆ ಬಂದರು. ಅವರ ಉಡುಪು ಶುಭ್ರ ಬಿಳಿ ಬಣ್ಣದ್ದಾಗಿತ್ತು ಮತ್ತು ಅವರ ತಲೆಗೂದಲು ಕಡುಗಪ್ಪು ಬಣ್ಣವನ್ನು ಹೊಂದಿತ್ತು. ಅವರಲ್ಲಿ ಪ್ರಯಾಣದ ಕುರುಹುಗಳಾದ ಸುಸ್ತು, ಧೂಳು, ತಲೆಗೂದಲು ಕೆದರಿರುವುದು, ಬಟ್ಟೆಗಳು ಕೊಳೆಯಾಗಿರುವುದು ಮುಂತಾದ ಯಾವುದೂ ಕಾಣಿಸುತ್ತಿರಲಿಲ್ಲ. ಪ್ರವಾದಿಯವರ (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಬಳಿ ಕುಳಿತಿದ್ದವರಲ್ಲಿ ಯಾರಿಗೂ ಅವರ ಪರಿಚಯವಿರಲಿಲ್ಲ. ಆ ವ್ಯಕ್ತಿ ಪ್ರವಾದಿಯವರ (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಮುಂದೆ ವಿದ್ಯಾರ್ಥಿ ಕುಳಿತುಕೊಳ್ಳುವಂತೆ ಕುಳಿತುಕೊಂಡರು. ನಂತರ ಅವರು ಇಸ್ಲಾಮಿನ ಬಗ್ಗೆ ಕೇಳಿದರು. ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಅವರಿಗೆ ಉತ್ತರ ನೀಡುತ್ತಾ ಇಸ್ಲಾಮಿನ ಐದು ಸ್ತಂಭಗಳ ಬಗ್ಗೆ ತಿಳಿಸಿದರು. ಎರಡು ಸಾಕ್ಷಿವಚನಗಳನ್ನು ಅಂಗೀಕರಿಸುವುದು, ಐದು ವೇಳೆಯ ಕಡ್ಡಾಯ ನಮಾಝ್‌ಗಳನ್ನು ಸರಿಯಾಗಿ ನಿರ್ವಹಿಸುವುದು, ಅರ್ಹರಿಗೆ ಝಕಾತ್ ನೀಡುವುದು, ರಮದಾನ್ ತಿಂಗಳಲ್ಲಿ ಉಪವಾಸ ಆಚರಿಸುವುದು ಮತ್ತು ಸಾಮರ್ಥ್ಯವಿರುವವರು ಹಜ್ಜ್ ಕರ್ಮವನ್ನು ಕಡ್ಡಾಯವಾಗಿ ನಿರ್ವಹಿಸುವುದು. ಆಗ ಪ್ರಶ್ನೆ ಕೇಳಿದ ವ್ಯಕ್ತಿ ನೀವು ಹೇಳಿದ್ದು ಸತ್ಯ ಎಂದರು. ಆ ವ್ಯಕ್ತಿ ಜ್ಞಾನವಿಲ್ಲದವರಂತೆ ಪ್ರಶ್ನೆ ಕೇಳಿ ನಂತರ ಉತ್ತರವನ್ನು ದೃಢೀಕರಿಸುವುದನ್ನು ಕಂಡು ಸಹಾಬಿಗಳಿಗೆ ಆಶ್ಚರ್ಯವಾಯಿತು. ನಂತರ ಆ ವ್ಯಕ್ತಿ ಈಮಾನ್‌ನ ಬಗ್ಗೆ ಕೇಳಿದರು. ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಅವರಿಗೆ ಉತ್ತರ ನೀಡುತ್ತಾ ಈಮಾನ್‌ನ (ವಿಶ್ವಾಸದ) ಆರು ಸ್ತಂಭಗಳ ಬಗ್ಗೆ ತಿಳಿಸಿದರು: ಅಲ್ಲಾಹನ ಅಸ್ತಿತ್ವದಲ್ಲಿ, ಅವರ ಗುಣಲಕ್ಷಣಗಳಲ್ಲಿ, ಸೃಷ್ಟಿ ಮುಂತಾದ ಅವನ ಕ್ರಿಯೆಗಳಲ್ಲಿ ಮತ್ತು ಆರಾಧನೆಗೆ ಅವನು ಮಾತ್ರ ಅರ್ಹನೆಂಬುದರಲ್ಲಿ ವಿಶ್ವಾಸವಿಡುವುದು. ಅಲ್ಲಾಹು ದೇವದೂತರನ್ನು ಪ್ರಕಾಶದಿಂದ ಸೃಷ್ಟಿಸಿದ್ದಾನೆ, ಅವರು ಅವನ ಗೌರವಾರ್ಹ ದಾಸರಾಗಿದ್ದಾರೆ, ಅವರು ಅಲ್ಲಾಹನ ಆಜ್ಞೆಗಳನ್ನು ಉಲ್ಲಂಘಿಸುವುದಿಲ್ಲ ಮತ್ತು ಅವನ ಆಜ್ಞೆಯಂತೆಯೇ ನಡೆಯುತ್ತಾರೆ ಎಂದು ವಿಶ್ವಾಸವಿಡುವುದು. ಕುರ್‌ಆನ್, ತೌರಾತ್, ಇಂಜೀಲ್ ಮುಂತಾದ ಅಲ್ಲಾಹು ಅವನ ಸಂದೇಶವಾಹಕರುಗಳಿಗೆ ಅವತೀರ್ಣಗೊಳಿಸಿದ ಗ್ರಂಥಗಳಲ್ಲಿ ವಿಶ್ವಾಸವಿಡುವುದು. ಅಲ್ಲಾಹನ ಧರ್ಮವನ್ನು ಮನುಷ್ಯರಿಗೆ ತಲುಪಿಸಿಕೊಟ್ಟ ನೂಹ್, ಇಬ್ರಾಹೀಮ್, ಮೂಸಾ, ಈಸಾ ಮತ್ತು ಅಂತಿಮ ಪ್ರವಾದಿ ಮುಹಮ್ಮದ್ (ಅವರೆಲ್ಲರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹಾಗೂ ಇತರ ಎಲ್ಲಾ ಪ್ರವಾದಿಗಳಲ್ಲಿ ಮತ್ತು ಸಂದೇಶವಾಹಕರುಗಳಲ್ಲಿ ವಿಶ್ವಾಸವಿಡುವುದು. ಅಂತ್ಯದಿನದಲ್ಲಿ ವಿಶ್ವಾಸವಿಡುವುದು. ಮರಣದ ನಂತರ ಸಂಭವಿಸುವ ಸಮಾಧಿ ಜೀವನ, ಬರ್ಝಕ್ ಜೀವನ, ಮನುಷ್ಯನನ್ನು ಪುನಃ ಜೀವಂತ ಎಬ್ಬಿಸಿ ವಿಚಾರಣೆ ಮಾಡುವುದು, ಅಂತಿಮವಾಗಿ ಅವನು ಸ್ವರ್ಗ ಅಥವಾ ನರಕಕ್ಕೆ ಸೇರುವುದು ಮುಂತಾದವುಗಳು ಈ ವಿಶ್ವಾಸದಲ್ಲಿ ಒಳಪಡುತ್ತವೆ. ಅಲ್ಲಾಹು ತನ್ನ ಶಾಶ್ವತ ಜ್ಞಾನದಿಂದ ಮತ್ತು ತನ್ನ ಯುಕ್ತಿಗೆ ಅನುಗುಣವಾಗಿ ಎಲ್ಲಾ ವಿಷಯಗಳನ್ನು ನಿರ್ಣಯಿಸಿದ್ದಾನೆ, ಅವುಗಳನ್ನು ದಾಖಲುಗೊಳಿಸಿದ್ದಾನೆ, ಅವುಗಳನ್ನು ಇಚ್ಛಿಸಿದ್ದಾನೆ, ಅವನ ನಿರ್ಣಯದಂತೆಯೇ ಅವು ಸಂಭವಿಸುತ್ತವೆ ಮತ್ತು ಅವನೇ ಅವುಗಳನ್ನು ಸೃಷ್ಟಿಸಿದ್ದಾನೆ ಎಂದು ವಿಶ್ವಾಸವಿಡುವುದು. ನಂತರ ಆ ವ್ಯಕ್ತಿ ಇಹ್ಸಾನ್‌ನ ಬಗ್ಗೆ ಕೇಳಿದರು. ಆಗ ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಇಹ್ಸಾನ್ ಎಂದರೆ, ನೀನು ಅಲ್ಲಾಹನನ್ನು ನೋಡುತ್ತಿರುವಂತೆ ಅವನನ್ನು ಆರಾಧಿಸುವುದು; ಆ ಸ್ಥಾನಕ್ಕೆ ತಲುಪಲು ನಿನಗೆ ಸಾಧ್ಯವಾಗದಿದ್ದರೆ ಕನಿಷ್ಠ ಅವನು ನಿನ್ನನ್ನು ನೋಡುತ್ತಿದ್ದಾನೆ ಎಂಬ ಪ್ರಜ್ಞೆಯೊಂದಿಗೆ ಅವನನ್ನು ಆರಾಧಿಸುವುದು ಎಂದು ತಿಳಿಸುತ್ತಾರೆ. ಮೊದಲನೆಯದು ನೋಡುವ ಸ್ಥಾನ. ಇದು ಉನ್ನತ ಸ್ಥಾನವಾಗಿದೆ. ಎರಡನೆಯದು ನೋಡುತ್ತಿದ್ದಾನೆಂಬ ಪ್ರಜ್ಞೆಯ ಸ್ಥಾನ. ನಂತರ ಆ ವ್ಯಕ್ತಿ ಪ್ರಳಯ ಯಾವಾಗ ಸಂಭವಿಸುತ್ತದೆ ಎಂದು ಕೇಳಿದರು. ಆಗ ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಪ್ರಳಯದ ಕುರಿತಾದ ಜ್ಞಾನವು ಅಲ್ಲಾಹನಿಗೆ ಮಾತ್ರವಿರುವ ಜ್ಞಾನವಾಗಿದ್ದು ಸೃಷ್ಟಿಗಳಲ್ಲಿ ಯಾರಿಗೂ ಅದು ತಿಳಿದಿಲ್ಲ, ಪ್ರಶ್ನೆ ಕೇಳಿದವನಿಗಾಗಲಿ, ಉತ್ತರ ನೀಡುವವನಿಗಾಗಲಿ ಅದು ತಿಳಿದಿಲ್ಲ ಎಂದು ವಿವರಿಸಿದರು. ನಂತರ ಆ ವ್ಯಕ್ತಿ ಪ್ರಳಯದ ಚಿಹ್ನೆಗಳ ಬಗ್ಗೆ ಕೇಳಿದರು. ಆಗ ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ), ಗುಲಾಮರು ಮತ್ತು ಅವರ ಸಂತಾನಗಳು ಹೆಚ್ಚಾಗುವುದು, ಮಕ್ಕಳು ತಾಯಂದಿರಿಗೆ ಅವಿಧೇಯತೆ ತೋರುವುದು ಮತ್ತು ಅವರನ್ನು ಗುಲಾಮರಂತೆ ನಡೆಸಿಕೊಳ್ಳುವುದು, ಕೊನೆಯ ಕಾಲದಲ್ಲಿ ಕುರಿಗಾಹಿಗಳಿಗೆ ಮತ್ತು ಬಡವರಿಗೆ ಅಪಾರ ಐಶ್ವರ್ಯವುಂಟಾಗಿ ಕಟ್ಟಡಗಳನ್ನು ನಿರ್ಮಿಸುವುದರಲ್ಲಿ ಮತ್ತು ಅಲಂಕರಿಸುವುದರಲ್ಲಿ ಅವರು ಅಹಂಭಾವ ಪ್ರಕಟಿಸುವುದು ಪ್ರಳಯದ ಚಿಹ್ನೆಗಳಾಗಿವೆ ಎಂದು ತಿಳಿಸಿದರು. ಪ್ರಶ್ನೆ ಕೇಳಿದ ವ್ಯಕ್ತಿ ಜಿಬ್ರೀಲ್ (ಅವರ ಮೇಲೆ ಶಾಂತಿಯಿರಲಿ) ಆಗಿದ್ದರು ಮತ್ತು ಅವರು ಸಹಾಬಿಗಳಿಗೆ ಈ ಋಜುವಾದ ಧರ್ಮವನ್ನು ಕಲಿಸಲು ಬಂದಿದ್ದರು ಎಂದು ನಂತರ ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ತಿಳಿಸಿದರು.
Hadeeth details

ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಇಸ್ಲಾಂ ಧರ್ಮವನ್ನು ಐದು ಸ್ತಂಭಗಳಿಂದ ಎತ್ತಿಹಿಡಿಯಲಾದ ಬಲಿಷ್ಠ ಕಟ್ಟಡಕ್ಕೆ ಹೋಲಿಸಿದ್ದಾರೆ. ಇಸ್ಲಾಂ ಧರ್ಮದ ಇತರ ಬೋಧನೆಗಳು ಈ ಕಟ್ಟಡದ ಪರಿಪೂರ್ಣತೆಯಂತೆ ಕಾರ್ಯನಿರ್ವಹಿಸುತ್ತವೆ. ಈ ಸ್ತಂಭಗಳಲ್ಲಿ ಮೊದಲನೆಯದು: ಎರಡು ಸಾಕ್ಷ್ಯವಚನಗಳು. ಅಂದರೆ, ಅಲ್ಲಾಹನ ಹೊರತು ಆರಾಧನೆಗೆ ಅರ್ಹರಾದ ಬೇರೆ ದೇವರಿಲ್ಲ ಮತ್ತು ಮುಹಮ್ಮದ್ ಅಲ್ಲಾಹನ ದಾಸರು ಮತ್ತು ಸಂದೇಶವಾಹಕರು ಎಂದು ಸಾಕ್ಷ್ಯ ವಹಿಸುವುದು, ಇವೆರಡು ಒಂದೇ ಸ್ತಂಭವಾಗಿದೆ. ಏಕೆಂದರೆ ಅವುಗಳನ್ನು ಪರಸ್ಪರ ಬೇರ್ಪಡಿಸಲಾಗುವುದಿಲ್ಲ. ದಾಸನು ಅಲ್ಲಾಹನ ಏಕತೆಯನ್ನು ಮತ್ತು ಆರಾಧನೆಗೆ ಅವನು ಮಾತ್ರ ಅರ್ಹನೆಂದು ಒಪ್ಪಿಕೊಂಡು, ಅದರ ಪ್ರಕಾರ ಕರ್ಮಗಳನ್ನು ಮಾಡುವ, ಮತ್ತು ಮುಹಮ್ಮದ್ (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ರ ಪ್ರವಾದಿತ್ವದಲ್ಲಿ ವಿಶ್ವಾಸವಿಟ್ಟು ಅವರನ್ನು ಅನುಸರಿಸುವ ದೃಢನಿಶ್ಚಯದೊಂದಿಗೆ ಈ ಎರಡು ವಚನಗಳನ್ನು ಉಚ್ಛರಿಸುತ್ತಾನೆ. ಎರಡನೆಯ ಸ್ತಂಭ: ನಮಾಝ್ ಸಂಸ್ಥಾಪಿಸುವುದು. ಅಂದರೆ ದಿನ-ರಾತ್ರಿಗಳಲ್ಲಿ ನಿರ್ವಹಿಸಲಾಗುವ ಫಜ್ರ್, ಝುಹರ್, ಅಸರ್, ಮಗ್ರಿಬ್ ಮತ್ತು ಇಶಾ ಎಂಬ ಐದು ಕಡ್ಡಾಯ ನಮಾಝ್‌ಗಳನ್ನು ಅವುಗಳ ಷರತ್ತುಗಳು, ಸ್ತಂಭಗಳು ಮತ್ತು ಕಡ್ಡಾಯಗಳನ್ನು ಪಾಲಿಸಿ ನಿರ್ವಹಿಸುವುದು. ಮೂರನೆಯ ಸ್ತಂಭ: ಕಡ್ಡಾಯ ಝಕಾತ್ (ದಾನ) ನೀಡುವುದು. ಇದೊಂದು ಆರ್ಥಿಕ ಆರಾಧನೆಯಾಗಿದ್ದು, ಧರ್ಮಶಾಸ್ತ್ರದಲ್ಲಿ ನಿರ್ದೇಶಿಸಿದಂತೆ ಒಂದು ನಿಗದಿತ ಪ್ರಮಾಣವನ್ನು ತಲುಪಿದ ಸಂಪತ್ತಿನ ಒಂದು ಭಾಗವನ್ನು ಕಡ್ಡಾಯವಾಗಿ ಅದರ ಅರ್ಹ ಫಲಾನುಭವಿಗಳಿಗೆ ನೀಡುವುದು. ನಾಲ್ಕನೆಯ ಸ್ತಂಭ: ಹಜ್ಜ್ ನಿರ್ವಹಿಸುವುದು. ಅಂದರೆ, ಅಲ್ಲಾಹನ ಆರಾಧನೆ ಸಲ್ಲಿಸುವುದಕ್ಕಾಗಿ ಹಜ್ಜ್ ಕರ್ಮಗಳನ್ನು ನಿರ್ವಹಿಸಲು ಮಕ್ಕಾಗೆ ತೆರಳುವುದು. ಐದನೆಯ ಸ್ತಂಭ: ರಮದಾನ್ ತಿಂಗಳಲ್ಲಿ ಉಪವಾಸ ಆಚರಿಸುವುದು. ಅಂದರೆ, ಅಲ್ಲಾಹನಿಗೆ ಆರಾಧನೆ ಸಲ್ಲಿಸುವ ಸಂಕಲ್ಪದೊಂದಿಗೆ, ಪ್ರಭಾತದಿಂದ ಸೂರ್ಯಾಸ್ತದ ತನಕ ಆಹಾರ, ಪಾನೀಯ ಮುಂತಾದ ಉಪವಾಸವನ್ನು ಅಸಿಂಧುಗೊಳಿಸುವ ವಸ್ತುಗಳಿಂದ ದೂರವಿರುವುದು.
Hadeeth details

ಈ ಹದೀಸಿನಲ್ಲಿ ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ದಾಸರ ಮೇಲಿರುವ ಅಲ್ಲಾಹನ ಹಕ್ಕನ್ನು ಮತ್ತು ಅಲ್ಲಾಹನ ಮೇಲಿರುವ ದಾಸರ ಹಕ್ಕನ್ನು ವಿವರಿಸುತ್ತಿದ್ದಾರೆ. ದಾಸರ ಮೇಲಿರುವ ಅಲ್ಲಾಹನ ಹಕ್ಕು ಏನೆಂದರೆ ಅವರು ಅವನನ್ನು ಮಾತ್ರ ಆರಾಧಿಸಬೇಕು ಮತ್ತು ಅವನೊಂದಿಗೆ ಏನನ್ನೂ ಸಹಭಾಗಿಯಾಗಿ ಮಾಡಬಾರದು. ಅಲ್ಲಾಹನ ಮೇಲಿರುವ ದಾಸರ ಹಕ್ಕು ಏನೆಂದರೆ ಅವನೊಂದಿಗೆ ಏನನ್ನೂ ಸಹಭಾಗಿಯನ್ನಾಗಿ ಮಾಡದ ಏಕದೇವ ವಿಶ್ವಾಸಿಗಳನ್ನು ಅವನು ಶಿಕ್ಷಿಸಬಾರದು. ನಂತರ ಮುಆದ್ ಹೇಳಿದರು: "ಓ ಅಲ್ಲಾಹನ ಸಂದೇಶವಾಹಕರೇ! ಈ ಅನುಗ್ರಹದ ಬಗ್ಗೆ ಜನರು ಸಂತೋಷಪಡುವುದಕ್ಕಾಗಿ ನಾನು ಈ ಸಿಹಿ ಸುದ್ದಿಯನ್ನು ಅವರಿಗೆ ತಿಳಿಸಲೇ?" ಆದರೆ ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಜನರು ಅದರ ಮೇಲೆ ಅವಲಂಬಿತರಾಗುವರು ಎಂಬ ಭಯದಿಂದ ಅದನ್ನು ತಡೆದರು.
Hadeeth details

ಮುಆದ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ಪ್ರವಾದಿಯವರ (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹಿಂಬಾಗದಲ್ಲಿ ಕುಳಿತು ಪ್ರಯಾಣ ಮಾಡುತ್ತಿದ್ದರು. ಆಗ ಅವರು "ಓ ಮುಆದ್" ಎಂದು ಕರೆದರು. ತಾನು ಹೇಳಲು ಹೋಗುವ ವಿಷಯದ ಪ್ರಾಮುಖ್ಯತೆಗೆ ಒತ್ತು ಕೊಡುವುದಕ್ಕಾಗಿ ಅವರು ಹೀಗೆ ಮೂರು ಬಾರಿ ಕರೆದರು. ಅವರು ಪ್ರತಿ ಬಾರಿ ಕರೆದಾಗಲೂ ಮುಆದ್, "ಲಬ್ಬೈಕ ಯಾ ರಸೂಲಲ್ಲಾಹ್ ವ ಸಅದೈಕ" ಎಂದು ಉತ್ತರಿಸುತ್ತಿದ್ದರು. ಅಂದರೆ ಓ ಪ್ರವಾದಿಯವರೇ ನಾನು ಪದೇ ಪದೇ ನಿಮ್ಮ ಕರೆಗೆ ಉತ್ತರಿಸುತ್ತೇನೆ. ನಿಮ್ಮ ಕರೆಗೆ ಉತ್ತರಿಸುವುದೇ ನನ್ನ ಸೌಭಾಗ್ಯವಾಗಿದೆ ಎಂದರ್ಥ. ಆಗ ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ತಿಳಿಸಿದರು: "ಲಾ ಇಲಾಹ ಇಲ್ಲಲ್ಲಾಹ್ (ಅಲ್ಲಾಹನ ಹೊರತು ಆರಾಧನೆಗೆ ಅರ್ಹರಾದ ಅನ್ಯ ಆರಾಧ್ಯರಿಲ್ಲ) ಮತ್ತು ಮುಹಮ್ಮದ್ ರಸೂಲುಲ್ಲಾಹ್ (ಮುಹಮ್ಮದ್ ಅಲ್ಲಾಹನ ಸಂದೇಶವಾಹಕರಾಗಿದ್ದಾರೆ) ಎಂದು ತನ್ನ ಹೃದಯದಿಂದ ಪ್ರಾಮಾಣಿಕವಾಗಿ, ಯಾವುದೇ ಕಾಪಟ್ಯವಿಲ್ಲದೆ ಸಾಕ್ಷಿ ವಹಿಸಿ, ನಂತರ ಅದೇ ಸ್ಥಿತಿಯಲ್ಲಿ ಮರಣಹೊಂದುವವನನ್ನು ಅಲ್ಲಾಹು ನರಕಾಗ್ನಿಗೆ ನಿಷಿದ್ಧಗೊಳಿಸುತ್ತಾನೆ." "ಜನರು ಈ ಸುದ್ದಿಯನ್ನು ಕೇಳಿ ಸಂತೋಷಪಡುವುದಕ್ಕಾಗಿ ನಾನು ಅವರಿಗೆ ಇದನ್ನು ತಿಳಿಸಲೇ ಎಂದು ಮುಆದ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ಪ್ರವಾದಿಯವರೊಂದಿಗೆ (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಕೇಳಿದರು. ಆಗ ಜನರು ಇದರ ಮೇಲೆ ಅವಲಂಬಿತರಾಗಿ ಕರ್ಮವೆಸಗುವುದನ್ನು ಕಡಿಮೆ ಮಾಡುವರೋ ಎಂದು ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಭಯಪಟ್ಟರು. ಮುಆದ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ನಿಧನರಾಗುವ ತನಕ ಈ ಹದೀಸನ್ನು ಯಾರಿಗೂ ತಿಳಿಸಲಿಲ್ಲ. ಆದರೆ ಜ್ಞಾನವನ್ನು ಬಚ್ಚಿಟ್ಟ ಪಾಪಕ್ಕೆ ಗುರಿಯಾಗುವೆನೋ ಎಂಬ ಭಯದಿಂದ ಮರಣದ ಸಮಯದಲ್ಲಿ ತಿಳಿಸಿಕೊಟ್ಟರು.
Hadeeth details

ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿ ಇರಲಿ) ಇಲ್ಲಿ ತಿಳಿಸುವುದೇನೆಂದರೆ, "ಲಾ ಇಲಾಹ ಇಲ್ಲಲ್ಲಾಹ್" (ಅಲ್ಲಾಹನ ಹೊರತು ಆರಾಧಿಸಲು ಅರ್ಹರಾದ ಅನ್ಯ ಆರಾಧ್ಯರಿಲ್ಲ) ಎಂದು ಸಾಕ್ಷಿವಹಿಸಿ ನಾಲಿಗೆಯಿಂದ ಉಚ್ಛರಿಸುವವರು ಮತ್ತು ಅಲ್ಲಾಹನ ಹೊರತಾಗಿ ಆರಾಧಿಸಲಾಗುವ ಎಲ್ಲವನ್ನೂ ನಿಷೇಧಿಸುವವರು ಹಾಗೂ ಇಸ್ಲಾಂ ಧರ್ಮದ ಹೊರತು ಬೇರೆ ಎಲ್ಲಾ ಧರ್ಮಗಳಿಂದ ದೂರ ಸರಿಯುವವರು ಯಾರೋ ಅವರ ಆಸ್ತಿ ಮತ್ತು ಪ್ರಾಣವು ಇತರ ಮುಸಲ್ಮಾನರಿಗೆ ಪವಿತ್ರವಾಗಿವೆ. ನಾವು ಅವರ ಬಾಹ್ಯ ಕರ್ಮಗಳನ್ನು ನೋಡಿ ನಿರ್ಧರಿಸಬೇಕು. ಅವರ ಆಸ್ತಿ ಮತ್ತು ಪ್ರಾಣವನ್ನು ತೆಗೆಯಲು ಯಾರಿಗೂ ಅನುಮತಿಯಿಲ್ಲ. ಇಸ್ಲಾಮೀ ಕಾನೂನಿನ ಪ್ರಕಾರ ಶಿಕ್ಷೆಯ ರೂಪದಲ್ಲಿ ಅವರ ಆಸ್ತಿ ಮತ್ತು ಪ್ರಾಣವನ್ನು ತೆಗೆಯಲು ಅನುಮತಿ ನೀಡುವ ಯಾವುದಾದರೂ ಅಪರಾಧವನ್ನು ಅವರು ಮಾಡಿದ ಹೊರತು. ಪುನರುತ್ಥಾನ ದಿನದಂದು ಅವರನ್ನು ವಿಚಾರಣೆ ಮಾಡುವ ಹೊಣೆ ಅಲ್ಲಾಹನದ್ದಾಗಿದೆ. ಅವರು ಸತ್ಯವಿಶ್ವಾಸಿಗಳಾಗಿದ್ದರೆ ಅವರಿಗೆ ಪ್ರತಿಫಲವಿದೆ. ಅವರು ಕಪಟವಿಶ್ವಾಸಿಗಳಾಗಿದ್ದರೆ ಅವರಿಗೆ ಶಿಕ್ಷೆಯಿದೆ.
Hadeeth details

ಒಬ್ಬ ವ್ಯಕ್ತಿ ಪ್ರವಾದಿಯರೊಡನೆ (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಎರಡು ವಿಷಯಗಳ ಬಗ್ಗೆ, ಅಂದರೆ ಸ್ವರ್ಗ ಪ್ರವೇಶವನ್ನು ಕಡ್ಡಾಯಗೊಳಿಸುವ ಮತ್ತು ನರಕ ಪ್ರವೇಶವನ್ನು ಕಡ್ಡಾಯಗೊಳಿಸುವ ಎರಡು ವಿಷಯಗಳ ಬಗ್ಗೆ ಕೇಳುತ್ತಾರೆ: ಆಗ ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೀಗೆ ಉತ್ತರಿಸುತ್ತಾರೆ: "ಸ್ವರ್ಗವನ್ನು ಕಡ್ಡಾಯಗೊಳಿಸುವ ವಿಷಯ ಯಾವುದೆಂದರೆ ಒಬ್ಬ ವ್ಯಕ್ತಿ ಅಲ್ಲಾಹನನ್ನು ಮಾತ್ರ ಆರಾಧಿಸುತ್ತಾ ಮತ್ತು ಅವನೊಡನೆ ಯಾವುದೇ ಸಹಭಾಗಿತ್ವ (ಶಿರ್ಕ್) ಮಾಡದೆ ಮರಣ ಹೊಂದುವುದು. ನರಕವನ್ನು ಕಡ್ಡಾಯಗೊಳಿಸುವ ವಿಷಯ ಯಾವುದೆಂದರೆ, ಅಲ್ಲಾಹನೊಡನೆ ಸಹಭಾಗಿತ್ವ ಮಾಡುತ್ತಾ, ಅವನ ಪ್ರಭುತ್ವದಲ್ಲಿ, ಆರಾಧನೆಯಲ್ಲಿ, ಮತ್ತು ಅವನ ಹೆಸರು ಮತ್ತು ಗುಣಲಕ್ಷಣಗಳಲ್ಲಿ ಅವನಿಗೆ ಸರಿಸಮಾನರನ್ನು ನಿಶ್ಚಯಿಸಿದ ಸ್ಥಿತಿಯಲ್ಲಿ ಮರಣಹೊಂದುವುದು.
Hadeeth details

ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಇಲ್ಲಿ ತಿಳಿಸುವುದೇನೆಂದರೆ, ಯಾರು ಅಲ್ಲಾಹನಿಗೆ ಮಾತ್ರ ಕಡ್ಡಾಯವಾಗಿ ಅರ್ಪಿಸಬೇಕಾದುದನ್ನು ಅಲ್ಲಾಹನಲ್ಲದವರಿಗೆ ಅರ್ಪಿಸುತ್ತಾರೋ, ಅಂದರೆ ಅಲ್ಲಾಹೇತರರನ್ನು ಕರೆದು ಪ್ರಾರ್ಥಿಸುತ್ತಾರೋ, ಅಥವಾ ಅಲ್ಲಾಹೇತರರಲ್ಲಿ ಸಹಾಯಯಾಚನೆ ಮಾಡುತ್ತಾರೋ, ಅವರು (ಪಶ್ಚಾತ್ತಾಪಪಡದೆ) ಅದೇ ಸ್ಥಿತಿಯಲ್ಲಿ ಸಾವನ್ನಪ್ಪಿದರೆ, ಅವರು ನರಕವಾಸಿಗಳಲ್ಲಿ ಸೇರುತ್ತಾರೆ. ಇದಕ್ಕೆ ತಮ್ಮ ಮಾತನ್ನು ಸೇರಿಸುತ್ತಾ ಇಬ್ನ್ ಮಸ್‌ಊದ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ಹೇಳುತ್ತಾರೆ: "ಯಾರು ಅಲ್ಲಾಹನ ಹೊರತಾಗಿ ಬೇರೆಯವರನ್ನು ಪ್ರಾರ್ಥಿಸದ ಸ್ಥಿತಿಯಲ್ಲಿ ಸಾವನ್ನಪ್ಪುತ್ತಾರೋ ಅವರ ಅಂತಿಮ ವಾಸಸ್ಥಳವು ಸ್ವರ್ಗವಾಗಿದೆ."
Hadeeth details

ಮುಆದ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರನ್ನು ಯಮನ್‌ಗೆ ಧರ್ಮಪ್ರಚಾರಕರಾಗಿ ಮತ್ತು ಬೋಧಕರಾಗಿ ಕಳುಹಿಸುವಾಗ ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಅವರೊಡನೆ, ಅಲ್ಲಿನ ಜನತೆ ಕ್ರಿಶ್ಚಿಯನ್ನರಾಗಿರುವುದರಿಂದ ಅದಕ್ಕೆ ಬೇಕಾದ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು, ನಂತರ ಅತ್ಯಂತ ಪ್ರಾಮುಖ್ಯವಾದ ವಿಷಯಗಳನ್ನು ಮೊದಲು ಬೋಧಿಸಬೇಕು ಎಂದು ವಿವರಿಸಿಕೊಟ್ಟರು. ಮೊದಲು ಅವರ ವಿಶ್ವಾಸವನ್ನು ಸರಿಪಡಿಸಲು, ಅಂದರೆ ಅಲ್ಲಾಹನ ಹೊರತು ಆರಾಧನೆಗೆ ಅರ್ಹರಾದ ಅನ್ಯರಿಲ್ಲ ಮತ್ತು ಮುಹಮ್ಮದ್ (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಅಲ್ಲಾಹನ ಸಂದೇಶವಾಹಕರೆಂದು ಸಾಕ್ಷಿ ವಹಿಸಲು ಅವರನ್ನು ಆಹ್ವಾನಿಸಬೇಕು. ಇದರ ಮೂಲಕ ಅವರು ಇಸ್ಲಾಂ ಧರ್ಮವನ್ನು ಪ್ರವೇಶಿಸುತ್ತಾರೆ. ಅವರು ಅದನ್ನು ಅನುಸರಿಸಿದರೆ ನಮಾಝ್ ಸಂಸ್ಥಾಪಿಸಲು ಅವರಿಗೆ ಆದೇಶ ನೀಡಬೇಕು. ಏಕೆಂದರೆ, ನಮಾಝ್ ಏಕದೇವವಿಶ್ವಾಸದ ನಂತರದ ಸ್ಥಾನದಲ್ಲಿರುವ ಅತಿದೊಡ್ಡ ಕಡ್ಡಾಯ ಕಾರ್ಯವಾಗಿದೆ. ಅವರು ನಮಾಝ್ ಸಂಸ್ಥಾಪಿಸಿದರೆ, ಅವರಲ್ಲಿರುವ ಶ್ರೀಮಂತರೊಡನೆ ಅವರ ಆಸ್ತಿಯ ಒಂದು ಭಾಗವನ್ನು ಝಕಾತ್ (ಕಡ್ಡಾಯ ದಾನ) ಆಗಿ ಬಡವರಿಗೆ ನೀಡಲು ಆದೇಶಿಸಬೇಕು. ಅವರ ಅತ್ಯುತ್ತಮ ಸಂಪತ್ತನ್ನು ತೆಗೆದುಕೊಳ್ಳಬಾರದೆಂದು ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಎಚ್ಚರಿಸಿದರು. ಏಕೆಂದರೆ, ಈ ವಿಷಯದಲ್ಲಿ ಮಧ್ಯಮ ನಿಲುವನ್ನು ಪಾಲಿಸಬೇಕಾಗಿದೆ. ನಂತರ ಅನ್ಯಾಯದಿಂದ ದೂರವಿರಲು ಉಪದೇಶಿಸಿದರು. ಅನ್ಯಾಯಕ್ಕೊಳಗಾದವನು ಅವರ ವಿರುದ್ಧ ಪ್ರಾರ್ಥಿಸದಿರುವುದಕ್ಕಾಗಿ. ಏಕೆಂದರೆ, ಅನ್ಯಾಯಕ್ಕೊಳಗಾದವನ ಪ್ರಾರ್ಥನೆಗೆ ಅಲ್ಲಾಹು ಉತ್ತರ ನೀಡುತ್ತಾನೆ.
Hadeeth details

ಪುನರುತ್ಥಾನ ದಿನ ಜನರ ಪೈಕಿ ತನ್ನ ಶಿಫಾರಸ್ಸನ್ನು ಪಡೆಯುವ ಅತ್ಯಂತ ಸೌಭಾಗ್ಯವಂತನು ಅಲ್ಲಾಹನ ಹೊರತು ಆರಾಧನೆಗೆ ಅರ್ಹರಾದ ಅನ್ಯರಿಲ್ಲ, ಅಂದರೆ ಅಲ್ಲಾಹನ ಹೊರತು ಯಾವುದೇ ಸತ್ಯ ಆರಾಧ್ಯರಿಲ್ಲ ಎಂದು ತನ್ನ ಹೃದಯದಿಂದ ನಿಷ್ಕಳಂಕವಾಗಿ ಹೇಳಿದವನು ಮತ್ತು ಬಹುದೇವಾರಾಧನೆ ಹಾಗೂ ತೋರಿಕೆಯಿಂದ ಮುಕ್ತನಾಗಿರುವವನು ಎಂದು ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ತಿಳಿಸುತ್ತಿದ್ದಾರೆ
Hadeeth details

ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿ ಇರಲಿ) ಇಲ್ಲಿ ತಿಳಿಸುವುದೇನೆಂದರೆ, ಸತ್ಯವಿಶ್ವಾಸದಲ್ಲಿ (ಈಮಾನ್) ಕರ್ಮಗಳು, ವಿಶ್ವಾಸಗಳು ಮತ್ತು ಮಾತುಗಳು ಸೇರಿದಂತೆ ಅನೇಕ ಶಾಖೆಗಳು ಮತ್ತು ಲಕ್ಷಣಗಳಿವೆ. ಸತ್ಯವಿಶ್ವಾಸದ ಅತ್ಯಂತ ಉನ್ನತ ಮತ್ತು ಶ್ರೇಷ್ಠ ಶಾಖೆಯು 'ಲಾ ಇಲಾಹ ಇಲ್ಲಲ್ಲಾಹ್' ಎಂಬ ವಚನದ ಅರ್ಥವನ್ನು ಸರಿಯಾಗಿ ಅರಿತು ಅದರಂತೆ ಜೀವನ ನಡೆಸುತ್ತಾ ಅದನ್ನು ಉಚ್ಛರಿಸುವುದು. ಅಲ್ಲಾಹು ಏಕೈಕ ಆರಾಧ್ಯನಾಗಿದ್ದಾನೆ; ಅವನ ಹೊರತು ಆರಾಧನೆಗೆ ಅರ್ಹರಾದ ಬೇರೆ ಆರಾಧ್ಯರಿಲ್ಲ ಮತ್ತು ಅವನು ಮಾತ್ರ ಆರಾಧನೆಗೆ ಅರ್ಹನು ಎಂಬುದು ಅದರ ಅರ್ಥ. ರಸ್ತೆಯಲ್ಲಿ ಜನರಿಗೆ ಅಡ್ಡಿಯುಂಟು ಮಾಡುವ ತೊಡಕುಗಳನ್ನು ನಿವಾರಿಸುವುದು ಸತ್ಯವಿಶ್ವಾಸದ ಕರ್ಮಗಳಲ್ಲಿ ಅತ್ಯಂತ ಚಿಕ್ಕದಾಗಿದೆ. ನಂತರ, ಸಂಕೋಚವು ಸತ್ಯವಿಶ್ವಾಸದ ಒಂದು ಲಕ್ಷಣವಾಗಿದೆಯೆಂದು ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿ ಇರಲಿ) ತಿಳಿಸುತ್ತಾರೆ. ಸಂಕೋಚ ಎಂಬುದು ಒಂದು ಗುಣವಾಗಿದ್ದು ಅದು ಸುಂದರವಾದ ಕರ್ಮಗಳನ್ನು ಮಾಡಲು ಮತ್ತು ಕೆಟ್ಟ ಕರ್ಮಗಳನ್ನು ತ್ಯಜಿಸಲು ಉತ್ತೇಜಿಸುತ್ತದೆ.
Hadeeth details